ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನಿಗೆ ಮೆಟ್ರೋ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿ ಎಂ ಆರ್ ಸಿ ಎಲ್ ಎಮ್ ಡಿ ಗೆ ಮಾನವ ಹಕ್ಕುಗಳ ಆಯೋಗವು ಘಟನೆಯ ಕುರಿತಂತೆ ಸಂಪೂರ್ಣ ವರದಿ ನೀಡುವಂತೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
BREAKING: ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧಿಸಿದ ಪೋಲಿಸರು | ‘Sandeshkhali Row’
ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚಿಗೆ ರೈತನಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾನವಮಾನವ ಹಕ್ಕುಗಳ ಆಯೋಗದಿಂದ ಬಿಎಮ್ಆರ್‌ಸಿಎಲ್‌ಗೆ ನೋಟಿಸ್ ಜಾರಿಯಾಗಿದೆ. ವ್ಯಕ್ತಿ ಬಟ್ಟೆ ಆಧಾರದಲ್ಲಿ ಅವಕಾಶ ನಿರಾಕರಣೆ ಮಾಡುವಂತಿಲ್ಲ. ಸಾರ್ವಜನಿಕ ಸಾರಿಗೆಯಲ್ಲಿ ನಿರಾಕರಣೆ ಮಾಡುವಂತಿಲ್ಲ. ಈ ಬಗ್ಗೆ ವರದಿ ನೀಡಲುವಂತೆ BMRCL ಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
ಇಂದಿನಿಂದ ಮಾ.7ರವರೆಗೆ 15ನೇ ಬೆಂಗಳೂರು ‘ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ
ಘಟನೇ ಹಿನ್ನೆಲೆ?
ಇದೇ ಫೆಬ್ರವರಿ 26 ರಂದು ಬಟ್ಟೆ ಕೊಳೆಯಿದೆ ಎಂಬ ಕಾರಣಕ್ಕೆ ಬಡ ರೈತನ ಮೇಲೆ ಮೇಟ್ರೋ ಸಿಬ್ಬಂದಿ ದುರಹಂಕಾರದ ವರ್ತನೆ ಮೆರೆದಿದ್ದರು. ಇದನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅಷ್ಟೇ ಅಲ್ಲ, ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದರು. ಜೊತೆಗೆ ಸಹ ಪ್ರಯಾಣಿಕರೆಲ್ಲರೂ ಸೇರಿ ಸಿಬ್ಬಂದಿಗೆ ಲೆಕ್ಕಿಸದೇ ರೈತರನ್ನು ಕರೆದುಕೊಂಡು ಹೋಗಿದ್ದರು.
ನಂತರ ಸಿಬ್ಬಂದಿ ಅತಿರೇಕದ ವರ್ತನೆಯ ವಿಡಿಯೋವನ್ನು ಬಿಎಂಆರ್ಸಿಎಲ್ಗೆ ಟ್ಯಾಗ್ ಮಾಡಿ ವಿಐಪಿಗಳಿಗೆ ಮಾತ್ರನಾ ಮೆಟ್ರೋ ಎಂದು ಪ್ರಶ್ನಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದರು. ರೈತ ಬೆಳೆ ಬೆಳೆದಿಲ್ಲ ಅಂದರೆ ನೀವು ಏನು ತಿಂತೀರಾ ಎಂದು ಜನರು ಪ್ರಶ್ನಿಸಿದ್ದರು.
ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೇಂದ್ರ ಸರ್ಕಾರ ಬದ್ಧ: ಸಚಿವೆ ನಿರ್ಮಲಾ ಸೀತಾರಾಮನ್
ಬಳಿಕ ಮೆಟ್ರೋ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಟ್ವಿಟರ್ ಬಳಕೆದಾರರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿತ್ತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿತ್ತು.