ಬೆಂಗಳೂರು : ರಾಜ್ಯದಲ್ಲಿ ಮಾನವ-ವನ್ಯ ಜೀವಿ ಸಂಘರ್ಷ ಹೆಚ್ಚಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆನೆ ದಾಳಿಗೆ ಬರೋಬ್ಬರಿ 142 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಪ್ರತಿ ವರ್ಷ ಆನೆ ದಾಳಿಗೆ ಸರಾಸರಿ 50 ಮಂದಿ ಬಲಿಯಾಗುತ್ತಿದ್ದಾರೆ. 2022-23 ರಲ್ಲಿ 53 ಮಂದಿ ಮೃತಪಟ್ಟರೆ, 2023-24 ರಲ್ಲಿ ಒಟ್ಟು 65 ಮಂದಿ ಆನೆ ದಾಳಿಗೆ ಬಲಿಯಾಗಿದ್ದಾರೆ. ಪ್ರಸಕ್ತ ವರ್ಷ ಈವರೆಗೆ 24 ಮಂದಿ ಸಾವನ್ನಪ್ಪಿದ್ದಾರೆ. ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆನೆಗಳ ದಾಳಿ ಪ್ರಕರಣಗಳು ಹೆಚ್ಚಾಗಿವೆ.
ಆನೆಗಳು ಕಾಡಿನಿಂದ ಹೊರ ಬರುವುದನ್ನು ತಡೆಯಲು 640 ಕಿ.ಮೀ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಸ್ತಾವನೆ ಇತ್ತು. ಪರಿಷ್ಕರಣೆಗೊಂಡು 730 ಕಿ.ಮೀಗೆ ಏರಿದೆ. ಅದರಲ್ಲಿ 311 ಕಿ.ಮೀ ಬ್ಯಾರಿಕೇಡ್ ಹಾಕಲಾಗಿದೆ.








