ನ್ಯೂಯಾರ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ “ಭವಿಷ್ಯದ ಶೃಂಗಸಭೆ” ಯನ್ನುದ್ದೇಶಿಸಿ ಮಾತನಾಡಿದರು. ವಿಶ್ವಸಂಸ್ಥೆಯ 79ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ. ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗೆ, ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳು ಮುಖ್ಯ. ಸುಧಾರಣೆಯು ಪ್ರಸ್ತುತತೆಯ ಕೀಲಿಕೈಯಾಗಿದೆ” ಎಂದರು.
“ಇಂದು, ಮಾನವಕುಲದ ಆರನೇ ಒಂದು ಭಾಗದಷ್ಟು ಜನರ ಧ್ವನಿಯನ್ನ ಇಲ್ಲಿಗೆ ತರಲು ನಾನು ಇಲ್ಲಿದ್ದೇನೆ. ನಾವು ಭಾರತದಲ್ಲಿ 250 ಮಿಲಿಯನ್ ಜನರನ್ನ ಬಡತನದಿಂದ ಮೇಲಕ್ಕೆತ್ತಿದ್ದೇವೆ ಮತ್ತು ಸುಸ್ಥಿರ ಅಭಿವೃದ್ಧಿ ಯಶಸ್ವಿಯಾಗಬಹುದು ಎಂದು ನಾವು ತೋರಿಸಿದ್ದೇವೆ. ಯಶಸ್ಸಿನ ಈ ಅನುಭವವನ್ನ ಗ್ಲೋಬಲ್ ಸೌತ್’ನೊಂದಿಗೆ ಹಂಚಿಕೊಳ್ಳಲು ನಾವು ಸಿದ್ಧರಿದ್ದೇವೆ” ಎಂದು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಿ ಹೇಳಿದರು.
“ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ. ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗೆ, ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳು ಮುಖ್ಯ. ಸುಧಾರಣೆಯು ಪ್ರಸ್ತುತತೆಯ ಕೀಲಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
UPDATE : ಇಸ್ರೇಲ್ ದಾಳಿಗೆ ನಲುಗಿದ ಲೆಬನಾನ್ : 270ಕ್ಕೂ ಹೆಚ್ಚು ಮಂದಿ ದುರ್ಮರಣ |Israel-Hezbollah war
“ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅದರ ಅಗತ್ಯವಿಲ್ಲ” : ತಮಿಳುನಾಡು ರಾಜ್ಯಪಾಲರು