ಶಿವಮೊಗ್ಗ : ಮೂರು ದಿನಗಳ ಕುಸ್ತಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿದೆ. ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಭಾನುವಾರ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಏರ್ಪಡಿಸಿದ್ದ ಮೂರು ದಿನಗಳ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದಂತ ಅವರು, ಹಿಂದಿನ ಎಲ್ಲ ವರ್ಷಗಳಿಗಿಂತ ಈ ವರ್ಷ ಕುಸ್ತಿ ಪಂದ್ಯಾವಳಿ ಸೇರಿ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿದೆ. ಭಕ್ತಾದಿಗಳು ದೊಡ್ಡ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸುಮಾರು 20 ಸಮಿತಿಗಳು ಅತ್ಯಂತ ಶಿಸ್ತುಬದ್ದವಾಗಿ ಜಾತ್ರೆಯನ್ನು ಸಂಯೋಜಿಸುವಲ್ಲಿ ಯಶಸ್ವಿಯಾಗಿವೆ. ಕುಸ್ತಿ ಪಂದ್ಯಾವಳಿ ಯಶಸ್ಸುಗೊಳಿಸುವಲ್ಲಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಮೂರು ದಿನ ಕುಸ್ತಿ ಪಂದ್ಯಾವಳಿಯಲ್ಲಿ ನೂರೈವತ್ತಕ್ಕೂ ಹೆಚ್ಚು ಕುಸ್ತಿ ಪಟುಗಳು ಪಾಲ್ಗೊಂಡಿದ್ದರು. ಸುಮಾರು 10ಲಕ್ಷಕ್ಕೂ ಅಧಿಕ ನಗದು ಬಹುಮಾನ, ಬೆಳ್ಳಿಗದೆ, ಅಖಾಡ ಬಳೆ, ಬೆಳ್ಳಿಪದಕ, ಬೆಳ್ಳಿ ಬಳೆ ಇನ್ನಿತರೆಗಾಗಿ ಕುಸ್ತಿ ನಡೆದಿತ್ತು. ದೇಶದ ಬೇರೆಬೇರೆ ಭಾಗಗಳಿಂದಲೂ ಪೈಲ್ವಾನರು ಪಾಲ್ಗೊಂಡಿದ್ದು ವಿಶೇಷವಾಗಿದೆ. ಪ್ರತಿದಿನ ಸಾವಿರಾರು ಜನರು ಕುಸ್ತಿ ವೀಕ್ಷಣೆ ಮಾಡಿದ್ದು ವಿಶೇಷವಾಗಿದೆ ಎಂದು ತಿಳಿಸಿದರು.
ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್, ಉಪಾಧ್ಯಕ್ಷ ಸುಂದರ ಸಿಂಗ್, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಖಜಾಂಚಿ ನಾಗೇಂದ್ರ ಕುಮಟಾ, ಕುಸ್ತಿ ಸಮಿತಿ ಸಂಚಾಲಕ ಅಶೋಕ್, ಸಹ ಸಂಚಾಲಕರಾದ ಶಶಿಕಾಂತ್ ಎಂ.ಎಸ್., ಸಂತೋಷ್ ಸದ್ಗುರು, ಗೋಪುರ ಸಮಿತಿ ಸಂಚಾಲಕ ಪುರುಷೋತ್ತಮ, ಬಾಬಣ್ಣ, ಮಂಜುನಾಥ್, ಕೃಷ್ಣಮೂರ್ತಿ, ಧರ್ಮಣ್ಣ, ಕೆಂಚಪ್ಪ, ಎಂ.ರಾಘವೇಂದ್ರ, ಎಚ್.ಆರ್.ಶ್ರೀಧರ್, ಸತೀಶ್ ಇನ್ನಿತರರು.
ಇವು ವಿಶ್ವದ ಅತಿ ಹೆಚ್ಚು `ಆದಾಯ’ ಹೊಂದಿರುವ ಟಾಪ್ 10 ಕಂಪನಿಗಳು : `ರಿಲಯನ್ಸ್’ಗೆ ಎಷ್ಟನೇ ಸ್ಥಾನ ಗೊತ್ತಾ?
BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ








