ಬೆಳಗಾವಿ:ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
ತನ್ನ ಹೆಂಡತಿಯ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ಆಕೆಗೆ ಬೆದರಿಕೆ ಹಾಕುತ್ತಿದ್ದ ಆರೋಪಿ ಎರಡನೇ ಮದುವೆ ಆಗಲು ಸಂಚು ಹೂಡಿದ್ದ ಎನ್ನಲಾಗಿದೆ .ಈ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಹೆಂಡತಿಗೆ ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.
ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ
ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ.ಇದರಿಂದ ಹೆದರಿದ ಪತಿ ಕಿರಣ್ ಓಡಿ ಹೋಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.ಕೂಡಲೇ ಆತನನ್ನು ರಕ್ಷಿಸಿದ ಪೋಲಿಸರು ಅವನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.