ಮುಂಬೈ: ಮಹಿಳೆಯೊಬ್ಬಳು ತನ್ನ ಗಂಡನ ಒಪ್ಪಿಗೆಯಿಲ್ಲದೆ ತನ್ನ ಗರ್ಭವನ್ನು ಅಂತ್ಯಗೊಳಿಸುವ ನಿರ್ಧಾರವನ್ನು ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯ ಎಂದು ಕರೆಯಬಹುದೇ ಎಂಬ ಪ್ರಶ್ನೆಯನ್ನು ಬಾಂಬೆ ಹೈಕೋರ್ಟ್ ಇತ್ತೀಚೆಗೆ ಕೇಳಿದೆ. ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ಊರ್ಮಿಳಾ ಜೋಶಿ-ಫಾಲ್ಕೆ ಅವರ ವಿಭಾಗೀಯ ಪೀಠವು ಮಹಿಳೆಯನ್ನು “ಮಗುವಿಗೆ ಜನ್ಮ ನೀಡುವಂತೆ ಒತ್ತಾಯಿಸಲಾಗುವುದಿಲ್ಲ” ಅಂತ ಇದೇ ವೇಳೇ ತಿಳಿಸಿದೆ.
ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಪೀಠಱ ಸಂತಾನೋತ್ಪತ್ತಿ ಆಯ್ಕೆಯನ್ನು ಹೊಂದುವ ಮಹಿಳೆಯ ಹಕ್ಕು ಭಾರತದ ಸಂವಿಧಾನದ ಅನುಚ್ಛೇದ 21 ರ ಅಡಿಯಲ್ಲಿ ಕಲ್ಪಿಸಲಾಗಿರುವಂತೆ ಅವಳ ವೈಯಕ್ತಿಕ ಸ್ವಾತಂತ್ರ್ಯದ ಅವಿಭಾಜ್ಯ ಅಂಗವಾಗಿದೆ ಎಂದು ನಿರ್ಧರಿಸಲಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಇದೇ ವೇಳೆ ವಿವಾಹದ ನಂತರ ಕೆಲಸಕ್ಕೆ ಹೋಗಲು ಬಯಸುವ ಮಹಿಳೆಯನ್ನು ಕ್ರೌರ್ಯ ಎಂದು ಕರೆಯಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13 (1) (ಐಎ) ಮತ್ತು 13 (1) (ಐಬಿ) ಅಡಿಯಲ್ಲಿ ವಿಚ್ಛೇದನಕ್ಕಾಗಿ ಪತಿಯ ಅರ್ಜಿಯನ್ನು ವಜಾಗೊಳಿಸಿದ ಮತ್ತು ವೈವಾಹಿಕ ಹಕ್ಕುಗಳ ಮರುಸ್ಥಾಪನೆಗಾಗಿ ಪತ್ನಿಯ ಮನವಿಯನ್ನು ಅನುಮತಿಸುವ ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠವು ವಜಾಗೊಳಿಸಿತು.