ಬೆಂಗಳೂರು: ಪತಿಯು ಉದ್ಯೋಗವಿಲ್ಲ, ಕೆಲಸ ಇಲ್ಲ ಎನ್ನುವಂತ ನೆಪ ಹೇಳಿ, ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ.
ವ್ಯಕ್ತಿಯೊಬ್ಬರು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಚಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಹೈಕೋರ್ಟ್ ನ್ಯಾಯಪೀಠದ ಮುಂದೆ ಅರ್ಜಿದಾರರ ಪರವಾಗಿ ವಕೀಲರು, ನನ್ನ ಅರ್ಜಿದಾರರು ಕೆಲಸ ಕಳೆದುಕೊಂಡಿದ್ದಾರೆ. ಈಗ ನಿರುದ್ಯೋಗಿಯಾಗಿದ್ದಾರೆ. ಹೀಗಾಗಿ ವಿಚ್ಚೇಧಿತ ಪತ್ನಿಗೆ ಜೀವನಾಂಶ ನೀಡುವಂತ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.
ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ದಂಪತಿಗಳು ಪರಸ್ಪರ ಬೇರೆಯಾಗಿದ್ದಾರೆ. ಈಗ ಪತಿ ತಾನು ಕೆಲಸ ಮಾಡುತ್ತಿಲ್ಲ ಎಂದು ಪತ್ನಿ ಹಾಗೂ ಅಪ್ರಾಪ್ತ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯೋದನ್ನು ಒಪ್ಪುವಂತದ್ದು ಅಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಜೀವನ ನಿರ್ವಹಣೆ ಸುಲಭದ ಮಾತಾಗಿಲ್ಲ. ಈ ಹಿನ್ನಲೆಯಲ್ಲಿ ಪತ್ನಿಗೆ 7 ಸಾವಿರ, ಅಪ್ರಾಪ್ತ ಮಗುವಿಗೆ 3 ಸಾವಿರ ರೂ ಜೀವನಾಂಶವನ್ನು ಪಾವತಿಸುವಂತೆ ಬೆಳಗಾವಿ ಕೌಟುಂಬಿಕ ನ್ಯಾಯಾಲಯ ನೀಡಿದ್ದಂತ ತೀರ್ಪನ್ನು ಎತ್ತಿ ಹಿಡಿದು, ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ.
Watch Video: ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ? ಕಂಡಕ್ಟರ್ ಸಹಾಯದಿಂದ ಬದುಕಿದ ‘ಬಡ ಜೀವ’