ತೆಲಂಗಾಣ : ಹೈದರಾಬಾದ್ ನಲ್ಲಿ ಮಧ್ಯಾಹ್ನದ ಊಟದ ವೇಳೆ ಒಟ್ಟಿಗೆ ಮೂರು ಪೂರಿಗಳನ್ನು ತಿಂದು ಉಸಿರುಗಟ್ಟಿ 11 ವರ್ಷದ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ, ನಿಮ್ಮ ಮಗ ಊಟದ ಸಮಯದಲ್ಲಿ ಒಟ್ಟಿಗೆ ಮೂರು ಪೂರಿಗಳನ್ನು ತಿಂದು ಉಸಿರು ಗಟ್ಟಿ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ ಎಂದು ಕರೆ ಬಂದಿತ್ತು ಎಂದು ಮೃತ ಬಾಲಕನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಸ್ವಸ್ಥನಾಗಿದ್ದ ಬಾಲಕನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.