ಹೈದ್ರಾಬಾದ್ : ಹೈದರಾಬಾದ್ ಥಿಯೇಟರ್ ಒಂದರಲ್ಲಿ ಪುಷ್ಪಾ 2 ಸಿನೆಮಾ ವೀಕ್ಷಣೆಯ ವೇಳೆ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.
ಹೌದು ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.








