ಹೈದರಾಬಾದ್ : ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐದನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕಮ್ ಜುವೆನೈಲ್ ಜಸ್ಟೀಸ್ ಬೋರ್ಡ್ ಮಂಗಳವಾರ ಜಾಮೀನು ಮಾಡಿದೆ. ಐದನೇ ಅಪ್ರಾಪ್ತ ಆರೋಪಿ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ಗೆ ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಏಕೈಕ ವಯಸ್ಕ ಆರೋಪಿ ಸಾದುದ್ದೀನ್ ಮಲ್ಲಿಕ್ನನ್ನು ಚಂಚಲಗುಡ ಜೈಲಿನಲ್ಲಿ ಇರಿಸಲಾಗಿದೆ.
ಮೇ 28 ರಂದು ಹೈದರಾಬಾದ್ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು.
ಹುಡುಗರು ಬಾಲಕಿಯನ್ನು ಮನೆಗೆ ಬಿಡಲು ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿ ಆಕೆಯ ಮೇಲೆ ಹಲ್ಲೆ ಮಾಡಿದ್ದರು. ಅವರು ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಇತರರು ಹೊರಗೆ ಕಾವಲು ನಿಂತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.