ಹೈದರಾಬಾದ್ : ಥಾಯ್ಲೆಂಡ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ.
ಸಿಎಂ ಬೊಮ್ಮಾಯಿ ರೌಡಿಗಳಿಗೆ ‘ಮಹಾಗುರು’ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ
ಡಿಸೆಂಬರ್ 02 (ಶುಕ್ರವಾರ) ಪುಸ್ತಕ ಕೊಡುವ ನೆಪದಲ್ಲಿ ಪ್ರಾಧ್ಯಾಪಕ ರವಿರಂಜನ್ ಎಂಬುವವರು ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಪ್ರಾಧ್ಯಾಪಕ, ಒಂದೆರಡು ಗಂಟೆಗಳ ನಂತರ ವಿಶ್ವವಿದ್ಯಾನಿಲಯಕ್ಕೆ ಬಿಟ್ಟಿದ್ದರು. ಇದರಿಂದ ನೊಂದಿದ್ದ ಸಂತ್ರಸ್ತ ವಿದ್ಯಾರ್ಥಿನಿ ಅಳುತ್ತಿರುವುದನ್ನು ಕಂಡ ಆಕೆಯ ಸ್ನೇಹಿತರು ವಿಚಾರಿಸಿದ್ದಾರೆ. ಆಗ ಯುವತಿ ತನ್ನ ಕಷ್ಟವನ್ನು ವಿವರಿಸಿದ್ದಾಳೆ. ಕೂಡಲೇ ಘಟನೆ ಕುರಿತಂತೆ ದೂರು ದಾಖಲಿಸಿದ್ದರು.
ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ವಿದ್ಯಾರ್ಥಿಯನ್ನು ಪ್ರಾಧ್ಯಾಪಕ, ತನ್ನ ಮನೆಗೆ ಕರೆದೊಯ್ದ ಘಟನೆ ನಡೆದಿದೆ. ರಾತ್ರಿ 9 ಗಂಟೆಯ ಸುಮಾರಿಗೆ ಆಕೆಯನ್ನು ಮತ್ತೆ ವಿಶ್ವವಿದ್ಯಾಲಯಕ್ಕೆ ಬಿಟ್ಟಿದ್ದಾರೆ. ವಿಷಯ ತಿಳಿದ ಆಕೆಯ ಸ್ನೇಹಿತರು ವಿಚಾರಿಸಿದಾಗ ಪ್ರೊಫೆಸರ್ ತನಗೆ ಕಿರುಕುಳ ನೀಡಲು ಪ್ರಯತ್ನಿಸಿದರು ಎಂದು ಯುವತಿ ಹೇಳಿದ್ದಾಳೆ ಎಂದು ಡಿಸಿಪಿ ತಿಳಿಸಿದ್ದಾರೆ.
ಘಟನೆ ಸಂಬಂಧ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಪ್ರಾಧ್ಯಾಪಕರನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಘಟನೆಯ ನಂತರ, ಪ್ರಾಧ್ಯಾಪಕರನ್ನು ತಕ್ಷಣ ಅಮಾನತುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಒಕ್ಕೂಟವು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿತ್ತು.
BIG NEWS: ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ಮೀಸಲಾತಿ ಪಡೆಯಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು