ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದ ಭಾಷಣದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ನನಗೆ 83 ವರ್ಷ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ ಎಂದು ತಿಳಿಸಿದರು.
ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನನಗೆ ಈಗ 83 ವರ್ಷ. ನಾನು ಇಷ್ಟು ಬೇಗ ಸಾಯುವುದಿಲ್ಲ ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಬದುಕುತ್ತೇನೆ. ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಮರು ಸ್ಥಾಪಿಸಲು ಹೋರಾಡುತ್ತೇವೆ ಎಂದು ತಿಳಿಸಿದರು.
ಭಾಷಣದ ವೇಳೆ ಅಸ್ವಸ್ಥ!
ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಈ ವೇಳೆ ವೇದಿಕೆ ಮೇಲೆ ಬಾಷಣ ಮಾಡುತ್ತಿದ್ದಾಗ ಏಕಾಏಕಿ ಅಸ್ವಸ್ಥರಾಗಿ ಕುಸಿದಿರುವ ಘಟನೆ ನಡೆದಿದೆ.ಹೌದು ಇಂದು ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದಾರೆ.ಇಂದು ಪ್ರಚಾರ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬೀಳುತ್ತಿದ್ದರು. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಅವರನ್ನು ತಡೆದು ನಿಲ್ಲಿಸಿದ್ದಾರೆ. ಕೂಡಲೇ ಅವರಿಗೆ ನೀರು ಕುಡಿಸಿದ್ದಾರೆ.ಈ ವೇಳೆ ಸಾವರಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ನಂತರ ಕುರ್ಚಿಯ ಮೇಲೆ ಕುಳಿತುಕೊಂಡು ಭಾಷಣ ಮುಂದುವರಿಸಿದರು.