ವಿಜಯಪುರ : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು.
ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು.
ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು.
ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.
ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.
ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ.
ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ
ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.
Bitcoin: ಏಪ್ರಿಲ್.2022ರ ನಂತರ ಮೊದಲ ಬಾರಿಗೆ ‘45,000 ಡಾಲರ್’ ಗಡಿದಾಟಿದ ‘ಬಿಟ್ಕಾಯಿನ್’
ರೈಲು ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ: ಕೇಂದ್ರದಿಂದ ವಿವರಗಳನ್ನು ಕೋರಿದ ಸುಪ್ರೀಂ ಕೋರ್ಟ್