Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ವೆಸ್ಟ್ ಇಂಡೀಸ್ ಖ್ಯಾತ ಕ್ರಿಕೆಟಿಗನ ವಿರುದ್ಧ 11 ಮಹಿಳೆಯರಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ: ವರದಿ

27/06/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನೊಬ್ಬ ಸ್ಟ್ರಾಂಗ್ CM, ನಿಮ್ಮ ಹಾಗೆ ವೀಕ್ PM ಅಲ್ಲ: ‘ಮೋದಿ’ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ
KARNATAKA

ನಾನೊಬ್ಬ ಸ್ಟ್ರಾಂಗ್ CM, ನಿಮ್ಮ ಹಾಗೆ ವೀಕ್ PM ಅಲ್ಲ: ‘ಮೋದಿ’ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ

By kannadanewsnow0919/03/2024 5:18 PM

ಬೆಂಗಳೂರು: ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ. ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂಬುದಾಗಿ ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಕಿಡಿಕಾರಿದ್ದಾರೆ.

ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದಿದ್ದಾರೆ.

ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ? ಎಂದು ಕೇಳಿದ್ದಾರೆ.

ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದು ಗುಡುಗಿದ್ದಾರೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ? ಎಂದು ಕಿಡಿಕಾರಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ

ಕೂದಲು ಉದುರುವ ಸಮಸ್ಯೆಗೆ ‘ಈ ಪದಾರ್ಥ’ ಶಾಶ್ವತ ಪರಿಹಾರ, ಏನದು.?

ನಾನೊಬ್ಬ ಸ್ಟ್ರಾಂಗ್ ಸಿಎಂ ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಮೋದಿ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ I am a strong CM not a weak PM like you: Siddaramaiah on PM Modi
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM2 Mins Read

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM1 Min Read

ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ

27/06/2025 8:24 PM1 Min Read
Recent News

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ವೆಸ್ಟ್ ಇಂಡೀಸ್ ಖ್ಯಾತ ಕ್ರಿಕೆಟಿಗನ ವಿರುದ್ಧ 11 ಮಹಿಳೆಯರಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ: ವರದಿ

27/06/2025 9:56 PM

BREAKING: ‘T20 ಪವರ್ ಪ್ಲೇ ನಿಯಮ’ಗಳನ್ನು ಪರಿಷ್ಕರಿಸಿದ ‘ICC’ | T20 Powerplay rules Change

27/06/2025 9:50 PM
State News
KARNATAKA

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

By kannadanewsnow0927/06/2025 10:26 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿಂದು ಪ್ರಾಂತ ಅಡಿಕೆ ಬೆಳೆಗಾರರ ಸಂಘದಿಂದ ನಡೆಸಲಾಗಿದ್ದಂತ ಅಡಿಕೆ ಬೆಳೆಗಾರರ ಸಮಾವೇಶದ ಹಾಗೂ ಅಡಿಕೆ ಬೆಳೆಗಾರರಿಗೆ…

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ

27/06/2025 8:24 PM

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

27/06/2025 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.