ಮಂಡ್ಯ : ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.
ಮದ್ದೂರು ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿ ಗ್ರಾಮಗಳಲ್ಲಿ ಅಂದಾಜು 2.50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರು ಕೂಡ ನನಗೆ ಅರ್ಜಿ ಕೊಟ್ಟು ನಮ್ಮ ಗ್ರಾಮಗಳ ಅಭಿವೃದ್ಧಿ ಮಾಡಿ ಎಂದು ಕೇಳಿಲ್ಲ. ಆದರೆ ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ 1500 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಜನ ನನ್ನ ಮೇಲೆ ಪ್ರೀತಿ ವಿಶ್ವಾಸ ಅಭಿಮಾನ ಇಟ್ಟಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಎಂದರು.
ರಾಜಕಾರಣ ಶಾಶ್ವತವಲ್ಲ ಅಭಿವೃದ್ಧಿ ಕಾರ್ಯಗಳೇ ಶಾಶ್ವತ. ಚುನಾವಣಾ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡೋಣ ಉಳಿದ ವೇಳೆ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋಣ. ಹಾಗಾಗಿ ಕ್ಷೇತ್ರದ ವಿವಿಧ ಗ್ರಾಮಗಳ ಕುಂದು ಕೊರತೆಗಳನ್ನು ಪಟ್ಟಿ ಮಾಡಿದ್ದು, ಹಂತ ಹಂತವಾಗಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ನಿರ್ದೇಶಕ ಪಿ.ಸಂದರ್ಶ್, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಕಾಂಗ್ರೆಸ್ ಮುಖಂಡರಾದ ಕೆ.ಎಂ.ರವಿ, ಗೋಪಿ, ಸುಧಾಕರ್, ಕೆ.ಆರ್.ಮಹೇಶ್, ಶರತ್, ಅಮರ್, ಇಂಜಿನಿಯರ್ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ: ಮದ್ದೂರು ಶಾಸಕ ಕೆ.ಎಂ.ಉದಯ್
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ








