ಬೆಂಗಳೂರು : ಬಿಹಾರ್ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ನವೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸಂಪುಟ ಪುನಾರಚನೆ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ ಯಾವಾಗ ಬಿಹಾರ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಿತೋ, ಇದೀಗ ನವೆಂಬರ್ ಕ್ರಾಂತಿ ಸಂಪುಟ ಪುನಾರಚನೆ ಸೇರಿ ಎಲ್ಲದಕ್ಕೂ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ನಾನು ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ ಎಂದು ಹಾಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವಿದೆ ಬಿಜೆಪಿ ಹೈಕಮಾಂಡ್ ನಿಂದ ಈ ಕುರಿತು ಸ್ಪಷ್ಟತೆ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನನಗಂತೂ ಈ ವಿಚಾರವಾಗಿ ಸ್ಪಷ್ಟತೆ ಸಿಕ್ಕಿದೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಪರೋಕ್ಷವಾಗಿ ನಾನೇ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಹಾರ ಫಲಿತಾಂಶ ನಮಗೆ ಆನೆ ಬಲ ಕೊಟ್ಟಿದೆ. ಬಿಹಾರ ವಿಧಾನಸಭೆ ಪಲಿತಾಂಶ ಒಂದು ಸಂದೇಶ ಕೂಡ ಕೊಟ್ಟಿದೆ. ನಾವೆಲ್ಲ ಒಟ್ಟಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಬೇಕಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ನಾವು ಹೋರಾಟ ಮಾಡಬೇಕಾಗಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸಬೇಕಿದೆ. ಕಾಂಗ್ರೆಸ್ ನವರ ಗ್ಯಾರಂಟಿಗಳಿಂದ ಅವರೇ ಬೇಸತ್ತು ಹೋಗಿದ್ದಾರೆ. ಅನಾವಶ್ಯಕವಾಗಿ ಕೇಂದ್ರ ಸರ್ಕಾರದವರು ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ ಎಂದು ಬಿ.ವೈ ವಿಜಯೇಂದ್ರ ತಿಳಿಸಿದರು.








