ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ದಾಖಲಾಗಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಅವರು ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆಂತಕ ಪಡಬೇಡಿ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ಮಾಡಿರುವಂತ ಅವರು, ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯನ್ನು ಗಮನಿಸಿದ್ದೇನೆ. ಆ ತರದ ಯಾವುದೇ ಅನಾರೋಗ್ಯಕ್ಕೆ ನಾನು ಒಳಗಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ನಿಗದಿಯಂತೆ ರೊಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ. ನಾನು ಶೀಘ್ರದಲ್ಲೇ ಮನಗೆ ಹಿಂದಿರುಗುತ್ತೇನೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
I learn that some exaggerated reports are appearing on news channels with regard to my health. I wish to clarify that I am in the hospital for only routine checks. I’ll be back home soon. There is no cause for any worry.
— H D Deve Gowda (@H_D_Devegowda) February 15, 2024
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ