ಬೆಂಗಳೂರು: ಶೂಟಿಂಗ್ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ನಟ ಉಪೇಂದ್ರ ಅವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಆರೋಗ್ಯವಾಗಿರೋದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಅಂದಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಂತ ರಿಯಲ್ ಸ್ಟಾರ್ ಉಪೇಂದ್ರ ಅವರು ಡಸ್ಟ್ ಅಲರ್ಜಿಯಿಂದ ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಚಿಕಿತ್ಸೆ ಪಡೆದ ಬಳಿಕ ನಟ ಉಪೇಂದ್ರ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿತ್ತು. ಅವರು ಅಸ್ವಸ್ಥಗೊಂಡ ಸುದ್ದಿಯನ್ನು ಕೇಳಿದಂತ ಅಭಿಮಾನಿಗಳು ಸೇರಿದಂತೆ ಅನೇಕರು ಆತಂಕಗೊಂಡಿದ್ದರು.