ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಬೆಂಗಳೂರಲ್ಲಿ ಹಳದಿ ಲೈನ್ ಮೆಟ್ರೋ ರೈಲು ಹಾಗೂ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹೀಗಾಗಿ ನಾಳೆ ಬೆಂಗಳೂರಿನ ಜನರೊಂದಿಗೆ ಇರಲು ಎದರು ನೋಡುತ್ತಿದ್ದೇನೆ ಎಂಬುದಾಗಿ ಕನ್ನಡದಲ್ಲೇ ಪ್ರಧಾನಿ ಮೋದಿ ಎಕ್ಸ್ ನಲ್ಲೇ ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಪ್ರಧಾನಿ ಮೋದಿ ಅವರು, ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು ಎಂದಿದ್ದಾರೆ.
ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವುದು ಎಂದು ತಿಳಿಸಿದ್ದಾರೆ.
ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.…
— Narendra Modi (@narendramodi) August 9, 2025
BREAKING: KSRTC ಚಾಲಕನ ಮೇಲೆ ಹಲ್ಲೆ ಮಾಡಿದ ಕೂಡ್ಲಿಗಿ ಪೊಲೀಸ್ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ಅಮಾನತು
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು