ಶಿವಮೊಗ್ಗ: ನನ್ನ ವಿರುದ್ಧ ನೂರು ಎಫ್ಐಆರ್ ದಾಖಲಿಸಿದ್ರೂ ನಾನು ಹೆದರೋದಿಲ್ಲ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದೇಶದ್ರೋಹಿ ಹೇಳಿಕೆ ನೀಡಿರುವ ಸಂಸದ ಡಿ.ಕೆ ಸುರೇಶ್ ಮತ್ತು ಅವರನ್ನು ಬೆಂಬಲಿಸಿದವರಿಗೆ ನೋಟಿಸ್ ನೀಡಿಲ್ಲ. ಆದರೇ ದೇಶ ವಿಭಜಿಸುವ ಹೇಳಿಕೆ ನೀಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರಲು ಒತ್ತಾಯಿಸಿದಂತ ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬುದಾಗಿ ಕಿಡಿಕಾರಿದರು.
ದಾವಣಗೆರೆ ಪೊಲೀಸರು ಫೆಬ್ರವರಿ.15ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು, ಎಫ್ಐಆರ್ ದಾಖಲಿಸಿದ್ದಾರೆ. ಇಂತಹ ನೂರು ನೋಟಿಸ್ ಕೊಟ್ಟರೂ, ಎಫ್ಐಆರ್ ದಾಖಲಿಸಿದರೂ ನಾನು ಹೆದರೋದಿಲ್ಲ ಎಬುದಾಗಿ ತಿಳಿಸಿದ್ದಾರೆ.
ಡಿ.ಕೆ ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ನಾನೆಲ್ಲೂ ಹೇಳಿಲ್ಲ. ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದೇನೆ ಎಂಬುದಾಗಿ ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್