ಶಿವಮೊಗ್ಗ : ನಾನು ಯಾವ ಗುಂಪಿನಲ್ಲಯೂ ಇಲ್ಲ. ನನ್ನದು ಕಾಂಗ್ರೇಸ್ ಗುಂಪು. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ಸಿಗ. ಯಾವ ಬಣದ ಜೊತೆಯೂ ಗುರುತಿಸಿಕೊಳ್ಳುವುದಿಲ್ಲ. ನನಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಕೆಲಸ ಮಾಡಿ ಕೊಡುತ್ತಾರೆ. ಇಂತಹ ಹೊತ್ತಿನಲ್ಲಿ ಬಣದ ಹಿಂದೆ ಹೋಗುವುದಿಲ್ಲ ಎಂದು ಸ್ಟಷ್ಟಪಡಿಸಿದರು.
ರಾಜ್ಯದಲ್ಲಿ ಕಾಂಗ್ರೇಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನ ಬೇಸರ ತರಿಸಿದೆ. ಕೇಂದ್ರ ನಾಯಕರು ತಕ್ಷಣ ಗೊಂದಲಕ್ಕೆ ಪರಿಹಾರ ಸೂಚಿಸಬೇಕು. ಪಕ್ಷದ ಜೊತೆ ಇದ್ದರೇ, ಹೈಕಮಾಂಡ್ ಮಾತಿಗೆ ಬದ್ದವಿದ್ದರೇ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಹಿಂದಿನಿಂದಲೂ ನಾನು ಹೈಕಮಾಂಡ್ ಮಾತಿಗೆ ಬದ್ದನಾಗಿದ್ದವನು ಎಂದು ಹೇಳಿದರು.
ಕೆಲವರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುವುದು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎನ್ನುವ ಇಚ್ಚೆ ಇರುತ್ತದೆ. ಪಕ್ಷ ಯಾರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವುದನ್ನು ತೀರ್ಮಾನಿಸುತ್ತದೆ. ನಾನು ಸಹ ಹಿಂದೆ ದೆಹಲಿಗೆ ಹೋಗಿ ವರಿಷ್ಟರನ್ನು ಭೇಟಿ ಮಾಡಿದ್ದೇನೆ. ಅಗತ್ಯ ಬಿದ್ದರೆ ಮತ್ತೆ ದೆಹಲಿಗೆ ಹೋಗುತ್ತೇನೆ. ಸಚಿವ ಸ್ಥಾನ ಕೊಡಿ ಎಂದು ಕೇಳುವುದು ನಮ್ಮ ಹಕ್ಕು ಎಂದು ತಿಳಿಸಿದರು.
ಮೀನುಗಾರಿಕೆ ಉದ್ಯಮ ಪುನಶ್ಚೇತನ, ಮೀನುಗಾರರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?
ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ








