ಶಿವಮೊಗ್ಗ: ಕೆ.ಎಸ್.ಈಶ್ವರಪ್ಪನವರ ಮಗನಿಗೆ ಟಿಕೆಟ್ ಕೈ ತಪ್ಪಲು ನಾನು ಕಾರಣವಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.
ಅವರು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ತೀರ್ಮಾನದಂತೆ ಟಿಕೆಟ್ ಹಂಚಿಕೆಯಾಗಿದೆ ಅವರೂ ಕೂಡ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂಬ ವಿಶ್ವಾಸವಿದೆ ಅಂತ ಅವರು ಹೇಳಿದರು. ಇನ್ನೂ ಎಲ್ಲವೂ ಸರಿ ಹೋಗುತ್ತದೆ ಎಂದುಕೊಂಡಿದ್ದೇನೆ. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಅಂಥ ಹೇಳಿದರು.