ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸ್ವಾಭಿಮಾನ ಸಮಾರಂಭದಲ್ಲಿ ಮಾತನಾಡಿ ವಿಪಕ್ಷಗಳು ರಾಜೀನಾಮೆ ಕೇಳುತ್ತಿದ್ದಾರೆ ನನಗೂ ಇದನ್ನು ಕೇಳಿ ಕೇಳಿ ಬೇಜಾರಾಗಿದೆ. ಆದರೂ ನಿಮಗೋಸ್ಕರ ನಾನು ಹೋರಾಟ ಮುಂದುವರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾನ್ವಿಯಲ್ಲಿ ಆಯೋಜಿಸಿದ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವನಲ್ಲ, ಜಗ್ಗುವನಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಅಂತ ನಿತ್ಯವೂ ಹೇಳುತ್ತಿದ್ದಾರೆ. ನನಗೂ ಬೇಜಾರಾಗಿದೆ.ಆದರೆ ನಿಮಗೋಸ್ಕರ ನಾನು ಹೋರಾಟ ಮುಂದುವರಿಸುತ್ತೇನೆ ಸ್ವಾಭಿಮಾನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನಾನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಮಹಾತ್ಮ ಗಾಂಧೀಜಿಯವರು ಒಂದು ಮಾತನ್ನು ಹೇಳಿದ್ದರು.ಎಲ್ಲಾ ನ್ಯಾಯಾಲಯಗಳಿಗಿಂತ ಆತ್ಮಸಾಕ್ಷಿ ಎನ್ನುವ ನ್ಯಾಯಾಲಯ ದೊಡ್ಡದು ಅಂತ ಹೇಳಿದರು. ನಾನು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸ್ವಾಭಿಮಾನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು