ಬೆಂಗಳೂರು: ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು.
ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ” ಎಂದರು.
ಧಾರ್ಮಿಕ ಸಂಸ್ಥೆಗಳ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದಾಗ “ಈ ವಿಚಾರದಲ್ಲಿ ಬಿಜೆಪಿಯದ್ದು ಇಬ್ಬಗೆಯ ನೀತಿ. ಸಣ್ಣ, ಸಣ್ಣ ದೇವಾಲಯಗಳ, ಅರ್ಚಕರ ಅಭಿವೃದ್ದಿಗೆ ಪೂರಕವಾಗಿದ್ದ ಈ ಮಸೂದೆಯನ್ನು ಬಿಜೆಪಿ ವಿರೋಧಿಸಿ ತನ್ನ ನಿಜ ಬಣ್ಣವನ್ನು ಬಯಲುಮಾಡಿಕೊಂಡಿದೆ. ಮುಂದಿನ ಜೂನ್ ತಿಂಗಳ ಅಧಿವೇಶನದಲ್ಲಿ ಬಹುಮತ ಸಿಗಲಿದೆ” ಎಂದು ಉತ್ತರಿಸಿದರು.
ಇಂದು ಸಂಜೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಂತಿಮ ಪಟ್ಟಿ ಪ್ರಕಟ- ಡಿಸಿಎಂ ಡಿಕೆಶಿ
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ