Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ‘ದೀರ್ಘಾವಧಿಯ ಸಿಎಂ ದಾಖಲೆ’ಯನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿದ್ಧರಾಮಯ್ಯ
KARNATAKA

ನಾನು ‘ದೀರ್ಘಾವಧಿಯ ಸಿಎಂ ದಾಖಲೆ’ಯನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ

ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

ರಾಜಕಾರಣ ತೃಪ್ತಿ ತಂದಿದೆ

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

ಬಜೆಟ್ ನಲ್ಲಿ ವಿಶೇಷ ಘೋಷಣೆ: ಕಾದು ನೋಡಿ

ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು.

ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ

ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.

ಎಚ್. ಡಿ ಕುಮಾರಸ್ವಾಮಿ ರಾಜಕೀಯವಾಗಿ ಮಾತನಾಡುತ್ತಾರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.

ಸೌಹಾರ್ದ ಭೇಟಿ

ನಿನ್ನೆ ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು ಎಂದರು.

ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ

Share. Facebook Twitter LinkedIn WhatsApp Email

Related Posts

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

1 Min Read

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

2 Mins Read

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read
Recent News

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

State News
KARNATAKA

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

By ಸುರೇಶ್‌ KARNATAKA 1 Min Read

ಕಲಬುರಗಿ: ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್‌ (ಎಸ್‌ವಿಪಿ) ವೃತ್ತದಲ್ಲಿರುವ ವಿಂಟೆಜ್ ದಿ ರೆಸ್ಟೋ ಬಾರ್ & ರೆಸ್ಟೋರೆಂಟ್ ಕಟ್ಟಡದಲ್ಲಿ ಗುರುವಾರ…

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.