Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
KARNATAKA

ನಾನು ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

By kannadanewsnow0911/10/2025 2:12 PM

ಬೆಂಗಳೂರು : “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ” ಎಂದು ತಿಳಿಸಿದರು.

“ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ” ಎಂದು ತಿಳಿಸಿದರು.

“ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ” ಎಂದು ಹೇಳಿದರು.

“ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ” ಎಂದೂ ತಿಳಿಸಿದರು.

‘ಸಚಿವ ಸಂಪುಟ ವಿಸ್ತರಣೆ’ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರಿನ ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

Share. Facebook Twitter LinkedIn WhatsApp Email

Related Posts

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM2 Mins Read

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM2 Mins Read

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM2 Mins Read
Recent News

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM
State News
KARNATAKA

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

By kannadanewsnow0908/04/2026 6:42 PM KARNATAKA 2 Mins Read

ಬೆಂಗಳೂರು: ಪತ್ರಿಕೋದ್ಯಮದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ, ಶತಮಾನೋತ್ಸವದ ಸಂಭ್ರಮದತ್ತ ದಾಪುಗಾಲು ಹಾಕುತ್ತಿರುವ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.