ಬೆಂಗಳೂರು: ಶ್ರೀರಾಮಸೇನೆ,ಬಜರಂಗದಳ, ಆರ್ ಎಸ್ ಎಸ್ ( RSS ) ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಈ ವೈರಲ್ ಪೋಸ್ಟ್ ( Viral Post ) ನಿಲ್ಲಿಸದೇ ಹೋದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಖಡಕ್ ಎಚ್ಚರಿಕೆ ನೀಡಿದ್ದಾರೆ.

BIGG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸಿಹಿಸುದ್ದಿ : `ಶುಭ ಲಗ್ನ’ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ!

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆಮೇಲೆ ಬುಲ್ ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು” ಎಂದಷ್ಟೇ ನಾನು ಹೇಳಿದ್ದು ಎಂದು ತಿಳಿಸಿದ್ದಾರೆ.

BIGG NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಬರ್ಬರ ಹತ್ಯೆಗೆ ಖಂಡನೆ : ` ರಾಜೀನಾಮೆಗೆ ಮುಂದಾದ ಬಿಜೆಪಿ ಸದಸ್ಯರು ‘

ನನ್ನ ಹೇಳಿಕೆಯನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂಬುದಾಗಿ ಎಂಬುದಾಗಿ ಹೇಳಿದ್ದಾರೆ.

Breaking news:‌ ಉತ್ತರ ಫಿಲಿಪೈನ್ಸ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ನಾಲ್ವರು ಸಾವು, ಹಲವರಿಗೆ ಗಾಯ

Share.
Exit mobile version