Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ರೈಲಿನಲ್ಲಿ ಸೀಟು ಸಿಗದಿದ್ದಕ್ಕೆ ‘ಬಾಂಬ್ ಇದೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ತಲೆಹರಟೆ ಪ್ರಯಾಣಿಕ: ಲಕ್ನೋದಲ್ಲಿ ಅರೆಸ್ಟ್!

​ಅಯೋಧ್ಯಾ ರಾಮ ಮಂದಿರದ ಹುಂಡಿ ಹಣಕ್ಕೆ ಕನ್ನ: ಎಸ್‌ಐಟಿ ತನಿಖೆಯ ಬಲೆಯಲ್ಲಿ 6 ಉದ್ಯೋಗಿಗಳು, ಬರೋಬ್ಬರಿ 2 ಕೋಟಿ ರೂ. ಜಪ್ತಿ!

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ‘ಐ ಡೋಂಟ್ ಕೇರ್’: ಸಿಎಂ ಸಿದ್ಧರಾಮಯ್ಯ ಖಡಕ್ ತಿರುಗೇಟು
KARNATAKA

ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ‘ಐ ಡೋಂಟ್ ಕೇರ್’: ಸಿಎಂ ಸಿದ್ಧರಾಮಯ್ಯ ಖಡಕ್ ತಿರುಗೇಟು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ಸಿಎಂ ವ್ಯಂಗ್ಯವಾಡಿದರು.

ಇವತ್ತು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದರು.

ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ ಎಂದು ಪ್ರಶ್ನಿಸಿದರು.

ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ ಎಂದು ಕರೆ ನೀಡಿದರು.

ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ ಎಂದು ಟೀಕಿಸಿದರು.

ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ ಎಂದು ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಶುಭ ಹಾರೈಸಿದರು.

ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಸಚಿವ ಎಂ.ಬಿ.ಪಾಟೀಲ್, ಸನ್ಮಾನಿತರಾದ ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಸಚಿವ ಜಮೀರ್ ಅಹಮದ್ ಖಾನ್ ಅವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್, ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಅವರು ಉಪಸ್ಥಿತರಿದ್ದರು.

ಜ.18ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ: ಈ ರೀತಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಿ

SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!

ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಬಯಸಿದ್ದೆ: ಯುವರಾಜ್ ಸಿಂಗ್ ತಂದೆ | Kapil Dev

Share. Facebook Twitter LinkedIn WhatsApp Email

Related Posts

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

2 Mins Read

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

2 Mins Read

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

2 Mins Read
Recent News

​ರೈಲಿನಲ್ಲಿ ಸೀಟು ಸಿಗದಿದ್ದಕ್ಕೆ ‘ಬಾಂಬ್ ಇದೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ತಲೆಹರಟೆ ಪ್ರಯಾಣಿಕ: ಲಕ್ನೋದಲ್ಲಿ ಅರೆಸ್ಟ್!

​ಅಯೋಧ್ಯಾ ರಾಮ ಮಂದಿರದ ಹುಂಡಿ ಹಣಕ್ಕೆ ಕನ್ನ: ಎಸ್‌ಐಟಿ ತನಿಖೆಯ ಬಲೆಯಲ್ಲಿ 6 ಉದ್ಯೋಗಿಗಳು, ಬರೋಬ್ಬರಿ 2 ಕೋಟಿ ರೂ. ಜಪ್ತಿ!

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

BREAKING: ​’ರಿಂಗ್ ಆಫ್ ಫೈರ್’ ಭೀತಿ: ಜಪಾನ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ, ಸ್ತಬ್ಧಗೊಂಡ ಬುಲೆಟ್ ರೈಲು ಹಾಗೂ ಸಾರಿಗೆ ಸಂಪರ್ಕ!

State News
KARNATAKA

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಹೊರವಲಯದ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ…

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

ಲಕ್ಷಾಂತರ ಹೃದಯಗಳಿಗೆ ಚೈತನ್ಯ ತುಂಬಿದ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.