ಬೆಂಗಳೂರು: ನನ್ನದು ಧಮ್ಕಿ ಸಂಸ್ಕೃತಿ ಅಲ್ಲ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರು ಆರೋಪಗಳಿಗೆ ಖಾರವಾದ ಉತ್ತರ ನೀಡಿದರಲ್ಲದೆ, ಅಂಥಾ ಸಂಸ್ಕೃತಿಯಿಂದ ಬಂದವರು ಯಾರು? ಎಂದರು.
ಧಮ್ಕಿ ಸಂಸ್ಕೃತಿಯಿಂದ ಬಂದವರು ಯಾರು? ಸೆಟ್ಲ್ ಮೆಂಟ್ ಮಾಡುತ್ತೇನೆ ಎಂದು ಹೇಳಿದವರು ಯಾರು? ಧಮ್ಕಿ ಹಾಕುವ, ಸೆಟ್ಲ್ ಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಧಮ್ಕಿ ಹಾಕಿ, ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕೋದು ನಮ್ಮ ಜಾಯಮಾನದಲ್ಲಿ ಇಲ್ಲ ಎಂದರು ಕುಮಾರಸ್ವಾಮಿ ಅವರು.
ನಾನು ಯಾರಿಗೂ ಧಮ್ಕಿ ಹಾಕಿಲ್ಲ, ಹಾಕುವುದೂ ಇಲ್ಲ. ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ಆತ್ಮಸಾಕ್ಷಿಯ ಮತ ಕೇಳುವುದಾಗಿ ಹೇಳಿದ್ದೇವೆ. ಇವರು ಯಾರೋ ಬಿಜೆಪಿ ಶಾಸಕರನ್ನು ಅಕ್ಕಪಕ್ಕ ಕೂರಿಸಿಕೊಂಡಿದ್ರಲ್ಲ, ಅದು ತಪ್ಪಲ್ಲವೇ? ಜೆಡಿಎಸ್ ಪಕ್ಷದ ಇಬ್ಬರು ಶಾಸಕರ ಮತ ಬರಲಿದೆ ಅಂತ ಹೇಳಿದ್ದಾರೆ, ಅದು ತಪ್ಪಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಯಾರಿಗೂ ಧಮಕಿ ಹಾಕಿಲ್ಲ, ಅಂತಹ ಸಂಸ್ಕೃತಿಯಿಂದ ಬಂದವನೂ ಅಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
BREAKING : ಇಸ್ರೇಲ್ ದಾಳಿಯಲ್ಲಿ ಈವರೆಗೆ ‘29,000 ಫೆಲೆಸ್ತೀನೀಯರ’ ದುರ್ಮರಣ
BREAKING : ರಾಜ್ಯಸಭಾ ಅಭ್ಯರ್ಥಿಯಾಗಿ ‘ಸೋನಿಯಾ ಗಾಂಧಿ’ ಅವಿರೋಧ ಆಯ್ಕೆ