ಬೆಂಗಳೂರು: ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರು ಐದು ವರ್ಷ ಇರ್ತಾರೋ ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿರುವಂತ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ.
ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹಲವು ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ನಿವಾಸ ಈಗ ಕೇಂದ್ರ ಬಿಂದುವಾಗಿದೆ. ಅವರನ್ನು ಕಾಂಗ್ರೆಸ್ ನ ಪ್ರಮುಖ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿ ಶಂಕರ್ ಸೇರಿದಂತೆ ಹಲವರು ಭೇಟಿ ಮಾಡಿದ್ದು, ತೀವ್ರ ಕುತೂಹಲವನ್ನೇ ಉಂಟು ಮಾಡಿದೆ.
ಸಚಿವ ಜಾರಕಿಹೊಳಿ ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಲೇ, ಅವರು ಐದು ವರ್ಷ ಇರ್ತಾರೋ, ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಠಿಸಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಾರಾ ಎಂಬ ಅನುಮಾನಕ್ಕೂ ಕಾರಣವಾಗಿದೆ.
ಕೊಡಗು: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut