ಕೊಪ್ಪಳ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS : ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್
ಡಿ.ಕೆ ಶಿವಕುಮಾರ್ ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ. ಯಾವ ಕಾರಣಕ್ಕೆ ಹೇಳಿದ್ದಾರೆ ಎಂದು ಅವರೊಂದಿಗೆ ಮಾತನಾಡುತ್ತೇನೆ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಂಗಳೂರು, ಶಿವಮೊಗ್ಗ ಜನ ಸೌಹಾರ್ಧಯತದಿಂದ ಇದ್ದಾರೆ. ರಾಜಕಾರಣಕ್ಕಾಗಿ ಇಂತಹ ಘಟನೆ ನಡೆಯವಂತೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಬಣವಿಲ್ಲ. ರಾಜ್ಯದಲ್ಲಿ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ತಾರೆ ಎಂದು ಯ.ಟಿ ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.