Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು.

ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಟೆಂಪಲ್ ರನ್ ಎನ್ನುವವರು, ದೇವಾಲಯ ಮುಚ್ಚಿಬಿಡಿ:

ನೀವು ದೇವಾಲಯ ಹಾಗೂ ಮಠಗಳ ಭೇಟಿಗೆ ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ. ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ. ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ? ಅವರವರ ವಿಚಾರ ಅವರವರ ನಂಬಿಕೆ. ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ. ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ” ಎಂದು ತಿಳಿಸಿದರು.

ಪಕ್ಷ ಹೇಳಿದಂತೆ ನಾನು, ಸಿಎಂ ಕೆಲಸ ಮಾಡುತ್ತಿದ್ದೇವೆ:

ನೀವು ಶೃಂಗೇರಿಗೆ ಭೇಟಿ ನೀಡಿದಾಗೆಲ್ಲಾ ನಿಮ್ಮ ರಾಜಕೀಯ ಜೀವನದಲ್ಲಿ ಹಲವು ತಿರುವುಗಳು ಪಡೆದಿವೆ ಎಂದು ಕೇಳಿದಾಗ, “ಯಾರೂ ತಲೆಕೆಡಿಸಿಕೊಳ್ಳುವುದು ಬೇಡ. ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ. ಪಕ್ಷ ಹೇಳಿದಂತೆ ನಾನು ಹಾಗೂ ಸಿಎಂ ಕೆಲಸ ಮಾಡುತ್ತೇವೆ. ಬೇರೆಯವರ ಮಾತುಗಳು ಗೌಣ” ಎಂದು ತಿಳಿಸಿದರು.

ಶ್ರೀಗಳು ರಾಜಕೀಯಕ್ಕೆ ಹಸ್ತಕ್ಷೇಪ ಮಾಡದೆ ಧರ್ಮ, ಸಂಸ್ಕೃತಿ, ಸಂಸ್ಕಾರ ಕಾಪಾಡುತ್ತಿದ್ದಾರೆ:

ಇಂದಿನ ಶೃಂಗೇರಿ ಪ್ರವಾಸದ ಬಗ್ಗೆ ಕೇಳಿದಾಗ, “ಇಂದು ಬಹಳ ಪವಿತ್ರವಾದ ದಿನ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳು ಮಠದ ಜವಾಬ್ದಾರಿ ಸ್ವೀಕರಿಸಿ 50 ವರ್ಷಗಳು ಪೂರ್ಣಗೊಂಡಿವೆ. ಧರ್ಮೋ ರಕ್ಷತಿ ರಕ್ಷಿತಃ ಎಂಬ ಶ್ಲೋಕವು ಧರ್ಮವನ್ನು ಯಾರು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ ಎಂಬ ಸಂದೇಶ ಸಾರುತ್ತದೆ. ಅದರಂತೆ ಈ ಮಹಾಸ್ವಾಮಿಗಳು ರಾಜಕಾರಣಕ್ಕೆ ಎಂದು ಹಸ್ತಕ್ಷೇಪ ಮಾಡದೆ ಕೇವಲ ಧರ್ಮ, ಸಂಸ್ಕೃತಿ, ಸಂಸ್ಕಾರ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಆಮೂಲಕ ತಮ್ಮ ಕರ್ತವ್ಯ ನಿಭಾಯಿಸಿಕೊಂಡು ನಮಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ.

ನನಗೆ ಮಹಾಸ್ವಾಮಿಗಳ ಮೇಲೆ ವಿಶೇಷವಾದ ನಂಬಿಕೆ, ಭಕ್ತಿ ಇದೆ. ತಾಯಿ ಸರಸ್ವತಿ ಅವರ ಮೇಲೆ ಆಶೀರ್ವಾದ ಮಾಡಿದ್ದಾಳೆ. ರಾಜೀವ್ ಗಾಂಧಿ ಅವರು ಇಲ್ಲಿ ಸಂಸ್ಕೃತ ವಿದ್ಯಾಪೀಠ ಮಾಡಲು ತೀರ್ಮಾನಿಸಿದರು. ಈ ಮಠವು ಬೆಂಗಳೂರಿನಲ್ಲಿ ಮಕ್ಕಳಿಗೆ ಜ್ಞಾನದ ದೀಪ ಬೆಳಗುವ ಪ್ರಯತ್ನ ಮಾಡುತ್ತಿದೆ. ಇವರ ಈ ಶುಭ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

ಸಿ.ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್: ಡಿಸಿಎಂ ಡಿ.ಕೆ ಶಿವಕುಮಾರ್ ಟೀಕೆ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.