ಬೆಂಗಳೂರು: ನಾನು ನನ್ನ ಹುಟ್ಟು ಹಬ್ಬದಂದು ಊರಲ್ಲಿ ಇರುವುದಿಲ್ಲ. ಸಿನಿಮಾ ಕೆಲಸ ನಿಮಿತ್ತ ಹೊರಗೆ ಇರಲಿದ್ದೇನೆ. ನನ್ನ ಹುಟ್ಟು ಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರ ಇರಲಿ ಅಂತ ನಟ ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದಿದ್ದಾರೆ.
ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫೆಕ್ಸ್, ಬ್ಯಾನರ್ ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ ಅಂತ ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ.
— Yash (@TheNameIsYash) December 30, 2024
BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಭದ್ರತೆಗಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ
BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025