ಮೈಸೂರು: ನಗರದಲ್ಲಿ ಬಸ್ ನಿಲ್ದಾಣವೊಂದನ್ನು ( Bus Stop ) ಮಸೀದಿಯ ಗುಂಬಜ್ ತರದಲ್ಲಿ ನಿರ್ಮಿಸಲಾಗಿತ್ತು. ಇದಕ್ಕೆ ಸಂಸದ ಪ್ರತಾಪ್ ಸಿಂಹ ( MP Prathap Simha ) ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ ತೆರವಿಗಾಗಿ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ತೆರವುಗೊಳಿಸಲಾಗಿದೆ. ಜೊತೆಗೆ ತಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದಿದ್ದಾರೆ.
ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಬಸ್ ನಿಲ್ದಾಣದಲ್ಲಿ ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೇ ಅದು ಮಸೀದಿ ತಾನೇ ಎಂದು ಪ್ರಶ್ನಿಸಿದ್ದಾರೆ.
BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : 22 ಸಾವಿರ ಮಂದಿಗೆ ನಿವೇಶನ : ಸಚಿವ ಆರ್. ಅಶೋಕ್ ಘೋಷಣೆ
ನಾನು ಮಸೀದಿ ಹೋಲುವಂತ ಬಸ್ ನಿಲ್ದಾಣದ ಗುಂಬಜ್ ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ ಎಂದಿದ್ದಾರೆ.
ಸೂರ್ಯ ಮುದ್ರೆ ಮಾಡುವುದರಿಂದಾಗುವ ಲಾಭಗಳೇನು? ಇದನ್ನು ಮಾಡುವ ಸರಿಯಾದ ವಿಧಾನ ತಿಳಿಯಿರಿ | surya mudra
ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗೂ ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ಶಾಸಕ ರಾಮದಾಸ್ ಗೆ ಧನ್ಯವಾದವನ್ನು ಕೂಡ ತಿಳಿಸಿದ್ದಾರೆ.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು. pic.twitter.com/9b1wPLULJ4
— Pratap Simha (@mepratap) November 27, 2022