ಬೆಂಗಳೂರು: ಕೆ.ಎಸ್ ಈಶ್ವರಪ್ಪ ಅವರಿಗೆ ಗುತ್ತಿದಾರರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತ ಎಂದು ತನಿಖೆಯಿಂದ ಹೊರಗೆ ಬಿದ್ದಿದೆ. ಹೀಗಾಗಿ ತಮ್ಮನ್ನ ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು ಎಂದು ಕೆ.ಎಸ್ ಈಶ್ವರಪ್ಪ ಬಿಗಿ ಹಿಡಿದು ಕೂಳಿತಿದ್ದಾರೆ.
ಈ ಕುರಿತು ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ನನಗೆ ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ಧನ್ಯವಾದ ಹೇಳುತ್ತೇನೆ. ಆದರೆ ಅವರು ಸದ್ಯಕ್ಕೆ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ತಮ್ಮ ಜೊತೆಗೆ ರಮೇಶ್ ಜಾರಕಿಹೊಳಿ ಅವರನ್ನೂ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಭರವಸೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಸಿಕ್ಕಿದೆ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ ಜೊತೆ ಮಾತನಾಡಿರುವೆ. ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆ ನಮ್ಮ ಕೇಂದ್ರ ನಾಯಕರು ಭರವಸೆ ನೀಡಿದ್ದಾರೆ. ಹಾಗಾಗಿ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಭವವಿದೆ ಎಂದು ತಿಳಿಸಿದ್ದಾರೆ. ಈ ಭರವಸೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ತಾವು ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಕೇಂದ್ರ ನಾಯಕರ ಮುಂದಿನ ಕ್ರಮಕ್ಕೆ ಕಾಯುವೆ. ಆ ನಂತರವಷ್ಟೇ ನನ್ನ ನಿರ್ಧಾರ ಹೊರಬೀಳಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.