ಮೈಸೂರು : ಬಜೆಟ್ ನಲ್ಲಿ ಸಾಲ ಮಾಡಿದ್ದನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದು, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ ಹೀಗಾಗಿ ಸಾಲ ಮಾಡಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನಿನ್ನೆ ಬಜೆಟ್ ನಲ್ಲಿ ಸಾಲ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ರಾಜ್ಯದಲ್ಲಿ ಅಭಿವೃದ್ಧಿಗಾಗಿ ಸಾಲ ಮಾಡಲೇಬೇಕಾಗುತ್ತದೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯದಿಂದ ಜನರಿಗೆ ಹೊರೆಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಸಾಲ ಮಾಡಿದ್ದಾರೆ? ಈ ಬಗ್ಗೆ ರಾಜ ಬಿಜೆಪಿ ನಾಯಕರಿಗೆ ಗೊತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆಸಿದರು. ನಾನು ಯಾವುದೇ ಒಂದು ವರ್ಗದ ಪರವಾಗಿ ಬಜೆಟ್ ಮಂಡಿಸಿಲ್ಲ. ಇದು ಎಲ್ಲಾ ವರ್ಗದ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.








