ಬೆಂಗಳೂರು: ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್ ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ ಕೇಳಿದರೆ ನಾನು ಎಲ್ಲಿ ಹೋಗಲಿ ಅಂತ ಹೇಳಿದ್ದರು. ನಿಮ್ಮಿಂದ ನಾನು ಯಾವ ರೀತಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಕಲಿಯಬೇಕಾ? ಪ್ರಿಯಾಂಕ್ ಖರ್ಗೆ ಮಾತಾಡಬೇಕಾದ್ರೆ ಹದ್ದುಬಸ್ತಿನಲ್ಲಿ ಮಾತಾಡಿ. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ನೀವು ಎಂದು ಪ್ರಿಯಾಂಕ ಖರ್ಗೆಗೆ ಸಚಿವರು ಎಚ್ಚರಿಕೆ ನೀಡಿದರು.
ಅಧಿಕಾರಕೋಸ್ಕರ ನಾವು ಯಾರ ಬಳಿಗೂ ಹೋಗೊಲ್ಲ. ಕಾಂಗ್ರೆಸ್ ಅವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ. ಯಾರ ಯಾರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ ಎಂಬುದು ಗೊತ್ತಿದೆ. ಯಾರು ಯಾರನ್ನ ಅಧಿಕಾರದಿಂದ ತೆಗೆದರು, ಎಷ್ಟು ಜನರ ರಾಜಕೀಯ ಜೀವನ ಹಾಳು ಮಾಡಿದರು ಎನ್ನುವುದು ನಿಮಗೆ ತಿಳಿದಿಲ್ಲವೇ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಚರಣ್ ಸಿಂಗ್ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಲು ಬಿಡಲಿಲ್ಲ. ಚಂದ್ರಶೇಖರ್ ಸೇರಿ ಎಷ್ಟು ಜನರನ್ನ ಬಲಿ ತೆಗೆದುಕೊಂಡರು. ಅವರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿಬಿಟ್ಟರು. ಹಾಗೆಯೇ ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದೇ ಇದೇ ಕಾಂಗ್ರೆಸ್. ಇವರಿಂದ ನಾನು ಕಲಿಬೇಕಾ? ಎಂದು ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.
ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಯದುವೀರ್ ಒಡೆಯರ್ ತಾತ ನಿಧನ: ಸಂಸದರ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ