ರಾಯಚೂರು : ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ತುಲಾಭಾರ ಕೂಡ ನಡೆಸಲಾಯಿತು. ಮಠದ ಪೀಠಾಧಿಪತಿಗಳಾದ ಶ್ರೀ ಸುಭುಧೇಂದ್ರ ತೀರ್ಥರು ಡಿಸಿಎಂ ಡಿಕೆ ಶಿವಕುಮಾರ್ ದಂಪತಿಗಳಿಗೆ ಆಶೀರ್ವದಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಗುರುತಿಸಿಲ್ವಾ ಅನ್ನುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ, ಡಿಸಿಎಂ ಆಗಿದ್ದೇನೆ ದೊಡ್ಡ ದೊಡ್ಡ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಈ ರಾಜ್ಯದಲ್ಲಿ ಇತಿಹಾಸ ಬರೆಯುತ್ತಿದ್ದೇನೆ ನೀರಾವರಿ ಇಲಾಖೆಯಲ್ಲಿ ಇತಿಹಾಸ ಬರೆಯುತ್ತಿದ್ದೇನೆ ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ರೈತರಿಗೆ ಹಣ ಕೊಡಬೇಕು ಹಣ ನೀಡುವ ತೀರ್ಮಾನ ಸಣ್ಣದಲ್ಲ ಅದೊಂದು ಐತಿಹಾಸಿಕ ನಿರ್ಧಾರವಾಗಿದೆ.
ಮಹದಾಯಿ ಮೇಕೆದಾಟು ಹೋರಾಟ ಮಾಡುತ್ತಿದ್ದಾನೆ ಬೆಂಗಳೂರಿನಲ್ಲಿ ಜಿಬಿಎ ಮಾಡಿ 1.5 ಲಕ್ಷ ಕೋಟಿ ಕೆಲಸ ಮಾಡಲು ವ್ಯವಸ್ಥೆ ಮಾಡಿದ್ದೇನೆ ಇದು ಸುಲಭವಾದ ಕೆಲಸವಲ್ಲ ಇದರಲ್ಲಿ ನಿಮ್ಮ ಸಮಸ್ಯೆ ಏನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಇನ್ನು ಮುಂದಿನ ಸಿಎಂ ಆಗಲು ಸತೀಶ್ ಜಾರಕಿಹೊಳಿ ಆಗಿದ್ದಾರೆ ಎನ್ನುವ ಹೇಳಿಕೆ ವಿಚಾರವಾಗಿ ಯತೀಂದ್ರ ಏನು ಹೇಳಿದ್ದರು ಅವರನ್ನೇ ಕೇಳಬೇಕು ಅವರ ಬಳಿ ಹೋಗಿಯೇ ಕೇಳಿ ಎಂದು ಪ್ರತಿಕ್ರಿಯಿಸಿದರು.