ಬೆಂಗಳೂರು : ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.








