ಕೊಪ್ಪಳ : ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು.
ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು.
ಗಂಗಾವತಿ ನನಗೆ ಮನೆ ಇದ್ದಂತೆ
ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ ಗೆಲ್ಲಿಸಿ ಎಂದು ಕರೆ ನೀಡಿದರು.
ಸಚಿವರಾದ ಶಿವರಾಜ ತಂಗಡಗಿ, ಬೈರತಿ ಸುರೇಶ್, ಜಿಲ್ಲೆಯ ಶಾಸಕರುಗಳು, ಮಾಜಿ ಸಚಿವರು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಮುಖಂಡರುಗಳು ಉಪಸ್ಥಿತರಿದ್ದರು.
BREAKING: ಕರ್ನಾಟಕದಲ್ಲೂ ‘ಪತಂಜಲಿ ಉತ್ಪನ್ನ’ ನಿಷೇಧ.?: ಗುಣಮಟ್ಟ ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಆದೇಶ