ಬೆಂಗಳೂರು : ನಾನು ಮಂತ್ರಿಯಾಗಿ 40 ವರ್ಷ ಆಯ್ತು, ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ರಾಜಕೀಯ ದುರುದ್ದೇಶದಿಂದ ಬಿಜೆಪಿಯರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ರದ್ದುಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.