ಬೆಂಗಳೂರು: ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸತ್ಯಕ್ಕೆ ದೂರವಾಗಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ದೆಹಲಿಗೆ ಯಾರನ್ನು ಕರೆದುಕೊಂಡು ಹೋಗುವುದಿಲ್ಲ. ಹೋಗುವವರು ಹೋಗಲಿ. ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ನಿರ್ಮಲಾನಂದ ಶ್ರೀ ಹೇಳಿಕೆ ಬಗ್ಗೆ ಕೇಳಿದಾಗ ಡಿಸಿಎಂ ಡಿ.ಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್








