ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು.
ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.
ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದರು.
ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪ ಅವರನ್ನು ಉಲ್ಲೇಖಿಸಿ ಸಮಾಜವಾದಿ ಹೋರಾಟದ ದಿನಗಳನ್ನು ಸ್ಮರಿಸಿದರು.
BREAKING: ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಶವ ಪತ್ತೆ
ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು








