ಚಿಕ್ಕಮಗಳೂರು ; ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
HEALTH TIPS: ಸಂಧಿವಾತದ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಲೇಬಾರದು…! ಯಾವುದು ಗೊತ್ತಾ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಹಳ ಕಡೆ ಆಹ್ವಾನ ಇದೆ. ಆದರೆ ಇನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಕೋಲಾರ, ಚಿಕ್ಕಮಗಳುರು, ವರುಣಾದಿಂದಲೂ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನರು, ಪಕ್ಷ ಏನು ಹೇಳುತ್ತಾರೋ ನೋಡೋಣ ಎಂದಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತುಂಬಾ ಚಿಂತನೆ ನಡೆಸಿದ್ದಾರೆ. ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯಗೆ ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೆಚ್ಚಿನ ಒತ್ತಾಯ ಕೇಳಿ ಬಂದಿದೆ ಎನ್ನಲಾಗಿದ್ದು, ವರುಣಾ ಅಥವಾ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.