ಬೆಂಗಳೂರು: ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ. ಹಾಸನ ವೀಡಿಯೋ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಬಹಳ ನೋವಾಗಿದೆ. ಅವರು ಆರೋಗ್ಯದ ಮೇಲೂ ಪರಿಣಾಮ ಬೀರಿದೆ ಎಂದರು.
ಈ ಘಟನೆ ದೇವೇಗೌಡ ಮೇಲೆ ಬಹಳ ಪರಿಣಾಮ ಬೀರಿದೆ. ಇದರಿಂದ ದೇವೇಗೌಡರು ಬಹಳ ನೋಂದಿದ್ದಾರೆ. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ. ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ಹೇಳಿದರು.
ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ