ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂಬುದಾಗಿ ತನ್ನನ್ನು ಭೇಟಿಯಾದಂತ ವಕೀಲರ ಮುಂದೆ ನಟ ದರ್ಶನ್ ಅಳಲು ತೋಡಿಕೊಂಡಿರೋದಾಗಿ ತಿಳಿದು ಬಂದಿದೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇಲ್ಲಿಗೆ ಅವರ ಪರ ವಕೀಲ ಅನಿಲ್ ತೆರಳಿ, ಅವರೊಂದಿಗೆ ಚರ್ಚಿಸಿದರು.
ತನ್ನ ಪರ ವಕೀಲ ಅನಿಲ್ ಮುಂದೆ ನಟ ದರ್ಶನ್ ತನಗೂ ಇದ್ದಕೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ನನ್ನನ್ನು ಬಂಧಿಸಲಾಗಿದೆ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆಯಲ್ಲಿ ದರ್ಶನ್ ನೋಡಲು ಠಾಣೆಗೆ ತೆರಳಿದ್ದಂತ ಸಂಬಂಧಿ ಶುಶಾಂತ್ ಗೆ ಅವಕಾಶ ಮಾಡಿಕೊಡಲಾಗಿದೆ. ಅಲ್ಲದೇ ಅವರ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನಿಶ್ ಜೊತೆಗೆ ಮೊಬೈಲ್ ಪೋನ್ ನಲ್ಲಿ ಮಾತನಾಡೋದಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿದು ಬಂದಿದೆ.
ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!