ಬೆಂಗಳೂರು : ನಿನ್ನೆ ರಾಜ್ಯ ರಾಜಕಾರಣದಲ್ಲಿ ಭಾರಿ ದೊಡ್ಡ ಬದಲಾವಣೆಯಾಗಿದ್ದು, ಸೆಪ್ಟೆಂಬರ್ ಕ್ರಾಂತಿ ಎಂದು ಬಾಂಬ್ ಸಿಡಿಸಿದ್ದ ರಾಜಣ್ಣ ಆಗಸ್ಟ್‌ನಲ್ಲೇ ರಾಜೀನಾಮೆ ಮೂಲಕ ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಪ್ರಭಾವಿ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರು ದಿಢೀರ್ ರಾಜೀನಾಮೆ ನೀಡಿರುವ ಬೆಳವಣಿಗೆ ನಡೆದಿದೆ.
ಈ ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ರಾಜೀನಾಮೆ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ. ನನ್ನನ್ನ ಸಂಪುಟದಿಂದ ವಜಾ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಹಿಂದೆ ದೊಡ್ಡ ಪಿತೂರಿ ಇದೆ. ಯಾರೆಲ್ಲ ಏನೆಲ್ಲ ಮಾಡಿದ್ದಾರೆ ಅಂತಾ ಕಾಲ ಬಂದಾಗ ಎಲ್ಲವನ್ನೂ ನಾನೇ ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಿದ್ದು ಹೈಕಮಾಂಡ್‌ನ ನಿರ್ಧಾರ. ಇದು ಪಕ್ಷದ ತೀರ್ಮಾನ ಆಗಿರುವುದರಿಂದ ನಾನು ಯಾವುದೇ ಪ್ರಶ್ನೆ ಮಾಡೋದಿಲ್ಲ. ನನ್ನ ವಿಚಾರದಲ್ಲಿ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಅವರಿಗೆ ತಪ್ಪು ಗ್ರಹಿಕೆಯಾಗಿದೆ. ಅದನ್ನು ಸರಿಪಡಿಸುತ್ತೇನೆ. ರಾಹುಲ್ ಗಾಂಧಿ ಅವರು ಎಲ್ಲಿ ಏನೇ ಮಾತನಾಡಿದರೂ ಪಕ್ಷಕ್ಕೆ ನಿಷ್ಠೆಯಿಂದ ಇರುತ್ತೇವೆ ಎಂದಿದ್ದಾರೆ.
ಇದು ನಮ್ಮ ಪಕ್ಷದ ತೀರ್ಮಾನ ಆಗಿರುವುದರಿಂದ ನಾನು ಪ್ರಶ್ನಿಸುವಂತಿಲ್ಲ. ಹೈಕಮಾಂಡ್‌ಗೆ ತಪ್ಪು ತಿಳುವಳಿಕೆ ಆಗಿರುವ ಮಾಹಿತಿ ಇದೆ. ಹೀಗಾಗಿ ಹಿರಿಯ ಸಚಿವರು ಹಾಗೂ ಶಾಸಕರೊಂದಿಗೆ ದೆಹಲಿಗೆ ಹೋಗುತ್ತೇನೆ. ಪಕ್ಷದ ವರಿಷ್ಠರಿಗೆ ಆಗಿರುವ ತಪ್ಪು ಗ್ರಹಿಕೆ ಬಗ್ಗೆ ಮನವರಿಕೆ ಮಾಡಿಸುತ್ತೇನೆ. ಹೈಕಮಾಂಡ್ ಮಾರ್ಗದರ್ಶನದಂತೆಯೇ ನಾನು ಮುಂದುವರಿಯುತ್ತೇನೆ ಎಂದೂ ಸ್ಪಷ್ಟನೆ ನೀಡಿದ್ದಾರೆ.