ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು.
ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದ ಅವರು ನಾನು ಮುಂದೆ ದೇಶದ ಪ್ರಧಾನಿಯಾದರು ಆಗಬಹುದು ಎಂದು ಹೇಳಿಕೆಯನ್ನು ನೀಡಿದ್ದಾರೆ.
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟಿಲ್ ಅವರು ಹಣವನ್ನ ಪ್ರಚಾರದ ವೇಳೆ ಒಂದು ಅವಕಾಶ ಕೊಡಿ ನಿಮ್ಮ ಮನೆಯ ಜೀತದಾಳಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದು, ಮನೆ ಯಜಮಾನಿಗೆ ಸರ್ಕಾರ 2 ಸಾವಿರ ರೂಪಾಯಿ ಹಣ ನೀಡುತ್ತಿದೆ. ಪುರುಷರಿಗೆ ಕೊಟ್ಟರೆ ಸಂಜೆ ಯಾವ ಅಂಗಡಿಗೆ ಹೋಗುತ್ತೆ ಗೊತ್ತಿದೆ ಎಂದು ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಹಾಸ್ಯ ಚಟಾಕಿ ಹಾರಿಸಿದರು.
ನನ್ನದು ಗಜಕೇಸರಿ ಯೋಗ, ನಾನು ಹುಟ್ಟಿದಾಗ ತಂದೆ ಶಾಸಕರಾದರು ಚಿಕ್ಕವಳಿದ್ದಾಗ ಏನಾಗ್ತಿಯಾ ಅಂದರೆ ಪ್ರಧಾನಿ ಆಗುತ್ತೇನೆ ಅಂತಿದ್ದೆ. ಈಗ ಸಂಸದಳಾಗುವ ಅವಕಾಶ ಬಂದಿದೆ. ಮುಂದೆ ನಾನು ಪ್ರಧಾನಿಯಾದರು ಆಗಬಹುದು ಎಂದು ಬಾಗಲಕೋಟೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಹೇಳಿಕೆ ನೀಡಿದರು.