ಬೆಂಗಳೂರು: ಮಾಜಿ ಸಚಿವ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಬರೋಬ್ಬರಿ 1.20 ಕೋಟಿ ಹಣ ಸಿಕ್ಕಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಹೊಸೂರಿನಲ್ಲಿರುವಂತ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ದಾಳಿಯ ವೇಳೆಯಲ್ಲಿ ಐಟಿ ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಸಂದರ್ಭದಲ್ಲಿ 1.20 ಕೋಟಿ ನಗದು, 800 ಗ್ರಾಂ ಚಿನ್ನ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಅಂದಹಾಗೇ ಕಳೆದ ಮೂರು ದಿನಗಳ ಹಿಂದೆ 10 ಲಕ್ಷ ಹಣದೊಂದಿಗೆ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯ ಲೋಕೇಶ್ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆಯಲ್ಲಿ ಅವರ ಮನೆಯ ಮೇಲೆ ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು.
ಕೇವಲ 9 ತಿಂಗಳಲ್ಲಿ ಕೆಟ್ಟ ಸರಕಾರ ಎಂಬ ಹೆಸರನ್ನು ಕಾಂಗ್ರೆಸ್ ಸರಕಾರ ಪಡೆದುಕೊಂಡಿದೆ- ಬಿವೈ ವಿಜಯೇಂದ್ರ
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ