ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್ ಐ ಟಿ ಅಧಿಕಾರಿಗಳು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು ಈ ಒಂದು ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮೊಬೈಲ್ಗಳಲ್ಲಿ ಯಾವುದೇ ಕಾರಣಕ್ಕೂ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಎಂದು ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಯುತ್ತಿರುವಾಗ ಆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹೇಳಿಕೆಯನ್ನು ನೀಡಿದರು.
ಯಾರು ಏನು ಮಾಡಿದ್ದಾರೆ ಅಂತ ತನಿಖೆಯ ಮೂಲಕ ಗೊತ್ತಾಗುತ್ತದೆ ಯಾವುದೇ ಕಾರಣಕ್ಕೂ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಫಾರ್ವರ್ಡ್ ಮಾಡಬೇಡಿ ಅಂತ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ. ಇಂದಿನವರೆಗೂ ಜವಾಬ್ದಾರಿಯುತ ವ್ಯಕ್ತಿಯಾಗಿ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು.
ಈ ರೀತಿ ಆದರೆ ಒಂದುವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು. ಹಾಸನದಲ್ಲಿ ಒಂದರಿಂದ ಒಂದುವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು. ಜನರ ಮೊಬೈಲ್ ನಲ್ಲಿ ಇರುವುದರ ಬಗ್ಗೆ ಮಾತನಾಡಿದರೆ ಉಪಯೋಗವಿಲ್ಲ. ವ್ಯವಸ್ಥಿತವಾಗಿ ತನಿಖೆ ಮಾಡುವುದು ಬಹಳ ಅವಶ್ಯಕತೆ ಇದೆ.ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಹಾಸನ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಹೇಳಿಕೆ ನೀಡಿದರು.